







ಪುತ್ತೂರು: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಶ್ರವಣ್ ಕುಮಾರ್ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ
ಪದೋನ್ನತಿ ಪಡೆದಿದ್ದಾರೆ.
ಅವರು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್ ಪಿಡಿಓ ಆಗಿ ನಿಯುಕ್ತಿಗೊಂಡಿದ್ದಾರೆ. ಶ್ರವಣ್ ಕುಮಾರ್ ಈ ಹಿಂದೆ ತಣ್ಣೀರುಪಂತ, ಇಳಂತಿಲ ಗ್ರಾಮ ಪಂಚಾಯತ್‌ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಹಾಗೂ ಉಜಿರೆ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಗ್ರೇಡ್-1 ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡು ಪ್ರಸ್ತುತ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಧರ್ಮಸ್ಥಳ ಗ್ರಾಮ ಪಂಚಾಯತ್‌ನ ಗ್ರೇಡ್-1 ಕಾರ್ಯದರ್ಶಿ ಹುದ್ದೆಯಿಂದ ಬಡ್ತಿ ಹೊಂದಿ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.












