ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ವಿಶ್ವದ ಹಾಕಿ ಮಾಂತ್ರಿಕ ದ್ಯಾನ್ ಚಂದ್ : ರವಿಶಂಕರ್ ವಿ. ಎಸ್

ಪುತ್ತೂರು,ಆ. ೨೯: ದ್ಯಾನ್ ಚಂದ್ ಕೇವಲ ಉತ್ತಮ ಕ್ರೀಡಾಪಟು ಮಾತ್ರವಲ್ಲದೆ ದೇಶಪ್ರೇಮಿಯೂ ಹೌದು. ಅವರಂತೆ ಪ್ರತಿಯೊಬ್ಬರೂ ದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ವಿಶ್ವದ ಹಾಕಿ ಒಲಂಪಿಕ್ಸ್‌ನಲ್ಲಿ ಪ್ರಪ್ರಥಮ ಬಾರಿಗೆ ಭಾರತಕ್ಕೆ ಹ್ಯಾಟ್ರಿಕ್ ಚಿನ್ನದ ಪದಕವನ್ನು ತಂದುಕೊಟ್ಟವರು ದ್ಯಾನ್ ಚಂದ್. ಹೀಗಾಗಿ ಅವರ ಜನ್ಮದಿನವನ್ನು ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸುವ ಮೂಲಕ ಅವರ ಸಾಧನೆಯನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ರವಿಶಂಕರ್ ವಿ.ಎಸ್ ಹೇಳಿದರು.

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಐಕ್ಯೂಎಸಿ ಘಟಕ, ಕ್ರೀಡಾ ಸಂಘ, ವಿದ್ಯಾರ್ಥಿ ಸಂಘ ಹಾಗೂ ದೈಹಿಕ ಶಿಕ್ಷಣ ವಿಭಾಗ ಇದರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ವೇದಿಕೆಯಲ್ಲಿ ಪರೀಕ್ಷಾಂಗ ಕುಲಸಚಿವ ಪ್ರಕಾಶ್ ಕುಮಾರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಮ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ವಿಶೇಷ ಅಧಿಕಾರಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ್ ಎಂ ನಿರ್ವಹಿಸಿದರು.

LEAVE A REPLY

Please enter your comment!
Please enter your name here