ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಪುತ್ತೂರು: ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಆ.29 ರಂದು ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಕಬಡ್ಡಿ ಆಟಗಾರ್ತಿ ವಿನುಶ್ರೀ ಮಾತನಾಡಿ, ಮೇಜರ್ ಧ್ಯಾನ್ ಚಂದ್ ಅವರು ಭಾರತದ ಹಾಕಿ ತಂಡಕ್ಕೆ ನೀಡಿದ ಕೊಡುಗೆ, ಸಾಧನೆಯನ್ನು ವಿವರಿಸಿದರು.

ವಿದ್ಯಾರ್ಥಿಗಳು ಯಾವುದಾದರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಕ್ಷಮತೆ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು ಎಂದರು.ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ಚಂದ್ರಮೋಹನ್ ಸ್ವಾಗತಿಸಿ ವಂದಿಸಿದರು. 7ನೇ ತರಗತಿಯ ಶ್ರೇಯಸ್ ಹೆಚ್ ನಿರೂಪಿಸಿದರು.

LEAVE A REPLY

Please enter your comment!
Please enter your name here