






ಪುತ್ತೂರು : ದ್ವಾರಕಾ ಕಾರ್ಪ್ ಪ್ರೈ. ಲಿ. ಮತ್ತು ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವುಗಳ ಸಹಯೋಗದಲ್ಲಿ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ ಆ.30 ರಂದು ನಡೆಯಿತು.


ಜೀವಿನ್ ಸೀನಿಯರ್ ಕೇರ್ ಬೆಂಗಳೂರು ಇದರ ಡಾ. ಮುರಳೀಧರ ಉದ್ಘಾಟಿಸಿದರು. ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ ಅಧ್ಯಕ್ಷತೆ ವಹಿಸಿದ್ದರು.ಕೆ.ವಿ.ಜಿ ಮೆಡಿಕಲ್ ಕಾಲೇಜಿನ ರೆಸ್ಪಿರೇಟರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅನಿರುದ್ಧ ಪ್ರಮುಖ ಅಭ್ಯಾಗತರಾಗಿ ಉಪಸ್ಥಿತರಿದ್ದರು.



ದ್ವಾರಕಾ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಅಮೃತಕೃಷ್ಣ ಎನ್, ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಕುಂಬ್ಳೆ, ಕಾರ್ಯಾಚರಣೆ ವಿಭಾಗದ ಮುಖ್ಯಸ್ಥ ದುರ್ಗಾಗಣೇಶ ಕೆ.ವಿ ಉಪಸ್ಥಿತರಿದ್ದರು.ಅಮೃತಕೃಷ್ಣ ಎನ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಗಣರಾಜ ಕುಂಬ್ಳೆ ವಂದಿಸಿದರು. ಬಳಿಕ ಡಾ. ಮುರಳೀಧರ ಅವರು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ನೂರಾರು ಮಂದಿ ಶಿಬಿರದ ಪ್ರಯೋಜನ ಪಡೆದರು.










