






ನೆಲ್ಯಾಡಿ: ಕಂಟೈನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.


ಪುತ್ತೂರು ಪಡೀಲ್ ನಿವಾಸಿ ಚಿಂತನ್ ವಿ.ನಾಯ್ಕ್(20ವ.)ಗಾಯಗೊಂಡವರಾಗಿದ್ದಾರೆ. ಇವರು ಬೆಂಗಳೂರಿನಿಂದ ಬೈಕ್ನಲ್ಲಿ ಪುತ್ತೂರಿಗೆ ಬರುತ್ತಿದ್ದವರು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿಗೆ ತಲುಪುತ್ತಿದ್ದಂತೆ ಮಂಗಳೂರಿನಿಂದ ಸಕಲೇಶಪುರ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ.



ಪರಿಣಾಮ ಬೈಕ್ ಸವಾರ ಚಿಂತನ್ ವಿ. ನಾಯ್ಕ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಇವರಿಗೆ ಪುತ್ತೂರು ಹಿತ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಕೆ.ಎಸ್. ಹೆಗ್ಡೆ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










