ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0


ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ 31ನೇ ಬ್ಯಾಚ್‌ನ 2026-27ನೇ ಸಾಲಿನ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ನಿರ್ದೇಶಕರಾದ ರೆ.ಫಾ.ಸ್ಯಾಮುವೆಲ್ ಜಾರ್ಜ್ ಒಐಸಿ ಅವರು ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ಹೊಸ ಭರವಸೆ ಹಾಗೂ ಹೊಸತನವನ್ನು ಬೆಳೆಸುವ ಪ್ರಯತ್ನವಾಗಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಹಿರಿಯ ತರಬೇತಿ ಅಧಿಕಾರಿ ಸುಬ್ರಾಯ ನಾಯಕ್ ಅವರು ಸ್ವಾಗತ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಮಾತನಾಡಿ, ನೂತನ ವಿದ್ಯಾರ್ಥಿಗಳು ಸಂಸ್ಥೆಯ ವಾತಾವರಣಕ್ಕೆ ಹೊಂದಿಕೊಂಡು ಆತ್ಮವಿಶ್ವಾಸದಿಂದ ತಮ್ಮ ತರಬೇತಿಯನ್ನು ಮುಂದುವರಿಸಬೇಕು ಎಂದು ತಿಳಿಸಿದರು.


ಸಂಸ್ಥೆಯ ಪ್ರಾಚಾರ್ಯ ಸಜಿ ಕೆ. ತೋಮಸ್ ಅವರು ವಿದ್ಯಾರ್ಥಿಗಳ ಕರ್ತವ್ಯ, ಶಿಸ್ತು ಹಾಗೂ ಜವಾಬ್ದಾರಿಗಳನ್ನು ನೆನಪಿಸಿ, ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ತರಬೇತಿ ಅಧಿಕಾರಿ ಜಾನ್ ಪಿ.ಎಸ್. ಸ್ವಾಗತಿಸಿ, ಜೇಮ್ಸ್ ಕೆ.ಎ.ವಂದಿಸಿದರು. ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ನೂತನ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

LEAVE A REPLY

Please enter your comment!
Please enter your name here