ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಾಗೂ ಈದ್ ಮಿಲಾದ್ ಆಚರಣೆ

0

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮಾಂಟೆಸ್ಸರಿ ಪ್ರಶಿಕ್ಷಣಾರ್ಥಿಗಳಿಂದ ಓಣಂ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ಓಣಂ ಹಾಗೂ ಈದ್ ಮಿಲಾದ್ ಹಬ್ಬಗಳ ವಿಶೇಷತೆ, ಐತಿಹಾಸಿಕ ಹಿನ್ನೆಲೆ ಹಾಗೂ ಸಾಮಾಜಿಕ ಮಹತ್ವದ ಕುರಿತು ಮಾಹಿತಿ ನೀಡಿದರು. ವಿವಿಧ ಧರ್ಮ, ಸಂಸ್ಕೃತಿ ಮತ್ತು ಪರಂಪರೆಗಳ ನಡುವೆ ಸೌಹಾರ್ದತೆ, ಪ್ರೀತಿ ಹಾಗೂ ಸಹಬಾಳ್ವೆಯ ಸಂದೇಶ ಸಾರುವ ಈ ಹಬ್ಬಗಳ ಆಚರಣೆಯ ಮಹತ್ವವನ್ನು ವಿವರಿಸಿದರು.

ಓಣಂ ಹಬ್ಬದ ಪ್ರಯುಕ್ತ ಪ್ರಶಿಕ್ಷಣಾರ್ಥಿಗಳು ವಿವಿಧ ಬಣ್ಣಬಣ್ಣದ ಹೂವುಗಳನ್ನು ಬಳಸಿ ಆಕರ್ಷಕವಾಗಿ ಪೂಕಳಂ ಹಾಕಿ ಸಂಪ್ರದಾಯಬದ್ಧವಾಗಿ ಓಣಂ ಹಬ್ಬವನ್ನು ಆಚರಿಸುವ ಮೂಲಕ ಗಮನ ಸೆಳೆದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು. ಜೊತೆಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಶಿಕ್ಷಣಾರ್ಥಿಗಳು ಉತ್ಸಾಹದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಐಐಸಿಟಿ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಅನಿತಾ, ಉಪನ್ಯಾಸಕಿಯರಾದ ಭಾಗ್ಯಲಕ್ಷ್ಮಿ ಎಸ್. ಹಾಗೂ ಸುಶ್ಮಿತಾ ಉಪಸ್ಥಿತರಿದ್ದರು.

ಸಂಸ್ಥೆಯ ಎಲ್ಲಾ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಶಿಕ್ಷಣಾರ್ಥಿಗಳಾದ ನಿವೇದಿತ ಹಾಗೂ ಲತಾ.ಎಮ್ ಅವರು ಕಾರ್ಯಕ್ರಮವನ್ನು ಸಂಘಟಿಸಿದರು. ಫಾತಿಮಾತ್ ಝುಹಾರ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here