ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ : ಮೂವರ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು: ಪುತ್ತೂರು ಪ್ರೆಸ್ ಕ್ಲಬ್ ಮುಂಭಾಗ ಸೆ.1ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.1ರಂದು ಮಧ್ಯಾಹ್ನ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜಾ ಅವರಿಗೆ ಮಾಹಿತಿ ಬಂದಿದ್ದು, ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ ಕೆಲವು ಜನರು ಪರಸ್ಪರ ಕೈಕೈ ಮಿಲಾಯಿಸಿ ಗಲಾಟೆ ಮಾಡುತ್ತಾ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದುದು ಕಂಡುಬಂದಿದೆ. ಪೊಲೀಸರು ತಿಳುವಳಿಕೆ ನೀಡಿದರೂ ಕಲಹ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್, ಬೊಳ್ವಾರಿನ ಹಕೀಂ ಮತ್ತು ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 104/2026, ಕಲಂ 194(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here