






ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಇಲಾಖೆ ವತಿಯಿಂದ ನಡೆಸಲ್ಪಡುವ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ವಹಿಸಿ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯಾ ಎ ಆರ್ ಕಾಸ್ಟಲಿನೋ ಪ್ರಾಸ್ತವಿಕ ಮಾತುಗಳೊಂದಿಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಬಾಲಕೃಷ್ಣ ಕೆ ಅಧ್ಯಕ್ಷರು ಕರ್ನಾಟಕ ರಾಜ್ಯ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಡಬ ಪುತ್ತೂರು ತಾಲೂಕು ಸಮಿತಿ, ಮಾಮಚ್ಚನ್ ಎಂ ಜಿಲ್ಲಾ ಕಾರ್ಯಾಧ್ಯಕ್ಷರು ಹಾಗೂ ಅಧ್ಯಕ್ಷರು ಕಡಬ ತಾಲೂಕು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶ್ರೀ ಅಬ್ರಹಾಂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ, ಶಾಲಾಡಳಿತ ಮಂಡಳಿಯ ಸದಸ್ಯರಾದ ಉದಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವಿಶ್ ಮುರುಳ್ಯ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೋಷಕಬಂಧು ಧನಂಜಯ ಕೇನಾಜೆ , ಸಹ ಆಡಳಿತ ಅಧಿಕಾರಿ ಹೇಮ ನಾಗೇಶ್ ರೈ, ಹಿರಿಯ ಶಿಕ್ಷಕಿ ಸವಿತಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಸ್ವಾಗತಿಸಿದರು. ವಿದ್ಯಾರ್ಥಿ ಧನುಷ್ ಕೆ (8ನೇ) ಪ್ರಾರ್ಥಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕೆ, ಸುವರ್ಣ ಕೆ ಬಿ ಮತ್ತು ಯೋಗ ಶಿಕ್ಷಕಿ ಶಶಿಕಲಾ ಕೆ ಕಾರ್ಯಕ್ರಮವನ್ನು ಸಂಘಟಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಮಿತ್ರರು ಸಹಕರಿಸಿದರು.












