ನಾಳೆ(ಸೆ.04) ಪರ್ಪುಂಜದಲ್ಲಿ ಸ್ನೇಹ ಯುವಕ ಮಂಡಲ, ಮಹಿಳಾ ಮಂಡಲದಿಂದ ಶ್ರೀಕೃಷ್ಣ ಜನ್ಮಾಷ್ಠಮಿ

0

ಪುತ್ತೂರು: ಸ್ನೇಹ ಯುವಕ ಮಂಡಲ ಹಾಗೂ ಸ್ನೇಹ ಮಹಿಳಾ ಮಂಡಲ ಪರ್ಪುಂಜ ಇವರ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ.4ರಂದು ಪರ್ಪುಂಜ ರಾಮಜಾಲು ಗರಡಿ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮವು ಬೆಳಿಗ್ಗೆ 8.30ಕ್ಕೆ ಉದ್ಘಾಟನೆಯೊಂದಿಗೆ ಆರಂಭಗೊಳ್ಳಲಿದ್ದು, ರಾಮಜಾಲು ಗರಡಿ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಕಾರ್ಯಕ್ರಮ ಉದ್ಘಾಟಿಸಲಿದ್ದು ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 4.30ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ, ಸಹಜ್ ರೈ ಬಳಜ್ಜ, ಡಾ.ಎಂ.ಅರುಣ್ ಶ್ಯಾಮ್, ಸುಷ್ಮಾ ಜಿ.ಭಂಡಾರಿ, ಉಜ್ವಲ್ ಪ್ರಭು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೆಳಿಗ್ಗೆಯಿಂದಲೇ ಪುರುಷರಿಗೆ ಕಂಬ ಏರುವುದು, ಮಡಿಕೆ ಹೊಡೆಯುವುದು, ಹಗ್ಗ ಜಗ್ಗಾಟ, ಗೋಣಿ ಚೀಲದ ಓಟ, ಕೋಲು ಓಟ ಹಾಗೇ ಮಹಿಳೆಯರಿಗೆ ಮಡಿಕೆ ಹೊಡೆಯುವುದು, ಹಗ್ಗ ಜಗ್ಗಾಟ, ಲಕ್ಕಿ ಸರ್ಕಲ್,ಗುಂಡೆಸೆತ, ಮಕ್ಕಳಿಗೆ ರಾಧಾಕೃಷ್ಣ ಛದ್ಮವೇಷ, ಕಡ್ಲೆ ಹೆಕ್ಕುವುದು ಸೇರಿದಂತೆ ವಿವಿಧ ರೀತಿಯ ಮನೋರಂಜನಾ ಆಟೋಟ ಸ್ಪರ್ಧೆಗಳು ನಡೆಯಲಿದೆ. ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸ್ನೇಹ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊ.9980273673 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here