ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್‌‌ಶಿಪ್‌‌ನಲ್ಲಿ ವಿವೇಕಾನಂದದ ಕೀರ್ತಿಗೆ ಚಿನ್ನದ ಪದಕ

0

ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಅವರೊಂದಿಗೆ ಕೀರ್ತಿ


ಪುತ್ತೂರು:ಪಂಜಾಬ್‌‌ನ ಲೂಧಿಯಾನದ ಗುರುನಾನಕ್ ಕ್ರೀಡಾಂಗಣದಲ್ಲಿ ಸೆ.1ರಿಂದ 3ರವರೆಗೆ ನಡೆದ 21ನೇ ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್‌‌ಶಿಪ್‌ನ 18ರ ವಯೋಮಾನದವರ ಕ್ರೀಡಾಕೂಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಪದವಿ‌ಪೂರ್ವ ಕಾಲೇಜ್‌‌ನ ಪ್ರಥಮ ವರ್ಷದ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ ಅವರು 1.68 ಮೀಟರ್ ಜಿಗಿದು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ.

ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ನಿವಾಸಿ ಮೋನಪ್ಪ ಮತ್ತು ಲಲಿತಾ ಅವರ ಪುತ್ರಿಯಾಗಿರುವ ಕೀರ್ತಿ ಅವರಿಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್‌‌ನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಬಾರ್ತಿಕುಮೇರು ಅವರು ತರಬೇತಿ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here