







ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಮತ್ತು ಶ್ರೀ ಗೌರಿ ಯುವತಿ ಮಂಡಲ ಸರ್ವೆ ಇದರ ಆಶ್ರಯದಲ್ಲಿ 25ನೇ ರ್ಷದ ಮೊಸರು ಕುಡಿಕೆ ಉತ್ಸವ ಸೆ.4ರಂದು ಭಕ್ತಕೋಡಿ ಶ್ರೀ ರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8.30ಕ್ಕೆ ಭಕ್ತಕೋಡಿ ಅಂಗನವಾಡಿ ವಠಾರದಲ್ಲಿ ಶ್ರೀಕೃಷ್ಣ ವೇಷಧಾರಿ ಪುಟಾಣಿಗಳ ಜೊತೆ ಭಜನಾ ಮೆರವಣಿಗೆಗೆ ಚಾಲನೆ ನೀಡಲಿದ್ದು 9 ಗಂಟೆಗೆ ಉದ್ಘಾಟನಾ ಸಮಾರಂಭ, ಸಭೆ ನಡೆಯಲಿದೆ. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 7.00ರಿಂದ ಚೈತನ್ಯ ಕಲಾವಿದರು ಬೈಲೂರು ಪ್ರಸ್ತುತ ಪಡಿಸುವ ‘ರಾಘು ಮಾಸ್ಟ್ರು’ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಶ್ರೀ ಷಣ್ಮುಖ ಯುವಕ ಮಂಡಲ ಹಾಗೂ ಶ್ರೀ ಗೌರಿ ಯುವತಿ ಮಂಡಲದ ಪದಾಧಿಕಾರಿಗಳು ತಿಳಿಸಿದ್ದಾರೆ.















