






ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ.ಪಿ.ಎಸ್ ಶಾಲೆ ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ 14ರ ವಯೋಮಾನದ ವಿಭಾಗದಲ್ಲಿ ಸುದಾನ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಪ್ರಧಾನ್ ಪಿ ಪ್ರಥಮ ಸ್ಥಾನವನ್ನು ಪಡೆದು ಬೆಂಗಳೂರು ಗ್ರಾಮಾಂತರದಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.


14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮಾನ್ಸಿ ಅಧಿಕ ರಾವ್ ಕದಂ (8ನೇ) ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.



ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ್ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.










