






ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 14ನೇ ವರ್ಷದ ಮೊಸರು ಕುಡಿಕೆ ಉತ್ಸವವು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.4ರಂದು ನಡೆಯಲಿದೆ.


ಬೆಳಿಗ್ಗೆ ಕಾರ್ಯಕ್ರಮವನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಹಿರಿಯ ಸದಸ್ಯ ಪುರುಷೋತ್ತಮ ಗೌಡ ಕಂಪ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ಧರ್ಮಪಾಲ ಕಲ್ಪಡ ವಹಿಸಲಿದ್ದಾರೆ. ಕಲ್ಪಡ ಶ್ರೀ ಉಳ್ಳಾಕುಲು ದೈವಸ್ಥಾನದ ಆಡಳಿತ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಆರೋಗ್ಯ ಸಹಾಯಕಿ ನೀಲಮ್ಮ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ಶಾಲಾ ಬಾಲಕ, ಬಾಲಕಿಯರಿಗೆ, ಪೋಷಕರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಯುವಕ ಮಂಡಲದ ಪದಾಧಿಕಾರಿಗಳು ತಿಳಿಸಿದ್ದಾರೆ.













