






ನೆಲ್ಯಾಡಿ: ಬಜತ್ತೂರು ಗ್ರಾಮದ ವಳಾಲು ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.


ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ಕೃಷ್ಣಪ್ರಸಾದ್ ಉಡುಪ ಮುದ್ಯ ಅವರ ನೇತೃತ್ವದಲ್ಲಿ ಅರ್ಚಕರಾದ ಈಶ್ವರ ಪರ್ಲತ್ತಾಯ ಧರ್ಮಸ್ಥಳ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಓರುಂಬೋಡಿ, ಉತ್ಸವ ಸಮಿತಿ ಅಧ್ಯಕ್ಷ ದಾಮೋದರ ಗೌಡ ಶೇಡಿ, ದೈವದ ಪರಿಚಾರಕರಾದ ಸುಂದರ ಪೂಜಾರಿ ನಾಯಿಲ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.



ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷರಾದ ನಾರಾಯಣ ನೀರಕಟ್ಟೆ, ಗೋಪಾಲ ವಳಾಲುದಡ್ಡು, ತಿಮ್ಮಪ್ಪ ಗೌಡ ಉಪಾತಿಪಾಲು, ಸೋಮಸುಂದರ ಕೊಡಿಪಾನ, ನೂತನ ಸಮಿತಿ ಪದಾಧಿಕಾರಿಗಳು, ಮಾಜಿ ಪದಾಧಿಕಾರಿಗಳು, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ದೇವಸ್ಥಾನದ ಸೇವಾ ಸಮಿತಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು. ಮಾಧವ ಓರುಂಬೋಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ವಸಂತ ಗೌಡ ಪಿಜಕ್ಕಳ ವಂದಿಸಿದರು.










