ಶ್ರೀ ಕ್ಷೇತ್ರ ಕೆಯ್ಯೂರು ದೇವಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವ

0

ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಕೆಯ್ಯೂರು ಇದರ ಆಶ್ರಯದಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ವರ್ದೆಗಳು ಸೆ.4 ರಂದು ಕೆಯ್ಯೂರು ದೇವಳದ ವಠಾರದಲ್ಲಿ ನಡೆಯಿತು.

ದೇವಳದ ಪ್ರಧಾನ ಅರ್ಚಕರಾದ ಶ್ರೀನಿವಾಸ ರಾವ್ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿ,, ತೆಂಗಿನಕಾಯಿ ಒಡೆಯುದರ ಮೂಲಕ ಕೆಯ್ಯೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಕೆ ಜಯರಾಮ ರೈ ಕೆಯ್ಯೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ಉಮಾ ಕಾಂತ್ ಬೈಲಾಡಿ,, ಅಶೋಕ್ ರೈ ದೇರ್ಲ, ಚಂದ್ರಶೇಖರ ಪೂಜಾರಿ ಕಣಿ ಯಾರು,, ದಾಮೋದರ ಪೂಜಾರಿ ಕೆಂಗುಡೇಲು, ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರೀ ಕೆಯ್ಯೂರು ಅಧ್ಯಕ್ಷ ಪ್ರವೀಣ್ ಕುಲಾಲ್ ಕಟ್ಟತ್ತಾರು, ಉಪಾಧ್ಯಕ್ಷ ಆದರ್ಶ್ ರೈ ದೇವಿನಗರ, ಕಾರ್ಯದರ್ಶಿ ಸುರೇಶ್ ರೈ ದೇವಿ ನಗರ, ಭಕ್ತಾದಿಗಳು, ಸಂಘ ಸಂಸ್ಥೆಗಳು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here