






ಪುತ್ತೂರು: ಸ್ನೇಹ ಯುವಕ ಮಂಡಲ ಹಾಗೂ ಸ್ನೇಹ ಮಹಿಳಾ ಮಂಡಲ ಪರ್ಪುಂಜ ಇವರ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ.4 ರಂದು ಪರ್ಪುಂಜ ರಾಮಜಾಲು ಗರಡಿ ವಠಾರದಲ್ಲಿ ನಡೆಯಿತು.
ರಾಮಜಾಲು ಗರಡಿ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ತೆಂಗಿನ ಕಾಯಿ ಒಡೆದು,ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಬಹಳ ವಿಜೃಂಭಣೆಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸ್ನೇಹ ಯುವಕ ಮತ್ತು ಮಹಿಳಾ ಮಂಡಲದವರು ನಡೆಸಿಕೊಂಡು ಬಂದಿದ್ದಾರೆ. ಇಡೀ ಸಂಘಟನೆಗೆ ಶ್ರೀ ಕೃಷ್ಣನ ಆಶೀರ್ವಾದ ಅನುಗ್ರಹ ಹಾಗೇ ರಾಮಜಾಲು ಮಣ್ಣಿನ ಬ್ರಹ್ಮಬೈದೆರ್ಕಳ ಆಶೀರ್ವಾದ ಇರಲಿ ಎಂದು ಹೇಳಿ ಶುಭ ಹಾರೈಸಿದರು.



ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸೀತಾರಾಮ ರೈ ಇಡಿಂಜಿಲ, ಕಿನ್ನಿಮಜಲು ಕೋಟಿ ಚೆನ್ನಯ ಗರಡಿಯ ಆಡಳಿತ ಮೊಕ್ತೇಸರ ಶಶಿಧರ ಕಿನ್ನಿಮಜಲು, ಅರ್ಚಕರಾದ ಹರೀಶ್ ಶಾಂತಿ, ಸಂಟ್ಯಾರು ವಿನಾಯಕ ಭಜನಾ ಮಂದಿರದ ಅಧ್ಯಕ್ಷ ಶರತ್ ಆಳ್ವ, ಕುಂಬ್ರ ಅತಿಥಿ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ‍್ಸ್ ಮಾಲಕ ಸಂಪತ್ ಕುಮಾರ್, ಸ್ನೇಹ ಯುವಕ ಮಂಡಲದ ಗೌರವ ಸಲಹೆಗಾರ ಮಿತ್ರದಾಸ ರೈ ಡೆಕ್ಕಳ, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಸ್ನೇಹ ಯುವಕ ಮಂಡಲದ ಗೌರವ ಸಲಹೆಗಾರರಾದ ರಾಜೇಶ್ ರೈ ಪರ್ಪುಂಜ ಮತ್ತಿತರರು ಉಪಸ್ಥಿತರಿದ್ದರು.




ಸಭಾ ಕಾರ್ಯಕ್ರಮದ ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ಆರಂಭಗೊಂಡಿತು. ವಿಶೇಷವಾಗಿ ಪುರುಷರಿಗೆ ಕಂಬ ಏರುವುದು, ಮಡಿಕೆ ಹೊಡೆಯುವುದು, ಹಗ್ಗ ಜಗ್ಗಾಟ, ಗೋಣಿ ಚೀಲದ ಓಟ, ಕೋಲು ಓಟ ಹಾಗೇ ಮಹಿಳೆಯರಿಗೆ ಮಡಿಕೆ ಹೊಡೆಯುವುದು, ಹಗ್ಗ ಜಗ್ಗಾಟ, ಲಕ್ಕಿ ಸರ್ಕಲ್,ಗುಂಡೆಸೆತ, ಮಕ್ಕಳಿಗೆ ರಾಧಾಕೃಷ್ಣ ಛದ್ಮವೇಷ, ಕಡ್ಲೆ ಹೆಕ್ಕುವುದು ಸೇರಿದಂತೆ ವಿವಿಧ ರೀತಿಯ ಮನೋರಂಜನಾ ಆಟೋಟ ಸ್ಪರ್ಧೆಗಳು ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ ಸಂಜೆ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ,ಶಿವಕೃಪಾ ಅಡಿಟೋರಿಯಂ ಮಾಲಕ ಹರಿಹರ ಕೋಡಿಬೈಲ್ ಸೇರಿದಂತೆ ಹಲವು ಮಂದಿ ಆಗಮಿಸಿ ಶುಭ ಹಾರೈಸಿದರು.

ಸಂಜೆ ಸಮಾರೋಪ ಸಮಾರಂಭ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ,ಬಹುಮಾನ ವಿತರಣೆ ನಡೆಯಿತು. ಸ್ನೇಹ ಯುವಕ ಮಂಡಲದ ಗೌರವ ಅಧ್ಯಕ್ಷ ಪ್ರೇಮ್‌ರಾಜ್ ರೈ ಪರ್ಪುಂಜ, ಅಧ್ಯಕ್ಷ ಅಶ್ವಿನ್ ಪೂಜಾರಿ, ಕಾರ್ಯದರ್ಶಿ ಕಿಶನ್ ಗೌಡ, ಸ್ನೇಹ ಮಹಿಳಾ ಮಂಡಲದ ಗೌರವ ಅಧ್ಯಕ್ಷೆ ಬೇಬಿ ರೈ, ಅಧ್ಯಕ್ಷೆ ಪ್ರಮೀಳಾ ಎಸ್, ಕಾರ್ಯದರ್ಶಿ ರೇಖಾ ಎಸ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.










