






ಪೆರಾಬೆ: ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಸುಂದರ ಆಚಾರ್ಯ(53ವ.) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೆ.3ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.


ಸುಂದರ ಆಚಾರ್ಯ ಅವರು ಹಲವು ದೈವಸ್ಥಾನಗಳ ತೋರಣ ಮುಹೂರ್ತ ಕಾರ್ಯಕ್ರಮದಲ್ಲಿ ಕೆಲಸ ಮಾಡಿದ್ದರು. ಕುಂತೂರು ಶಬರೀಶ ಪ್ರಗತಿಬಂಧು ತಂಡದ ಸದಸ್ಯರಾಗಿದ್ದ ಸುಂದರ ಆಚಾರ್ಯ ಅವರು, ಕುಂತೂರು ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಮೃತರು ಪತ್ನಿ ಸವಿತ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಾಂತ್ವಾನ ಹೇಳಿದರು.













