







ಆಲಂಕಾರು: ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕುಂಡಾಜೆ ತಿರುವಿನಲ್ಲಿ ಸೆ.4ರಂದು ನಡೆದಿದೆ.


ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕುಂಡಾಜೆ ತಿರುವಿನಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳಿದ್ದು ಇಲ್ಲಿ ದ್ವಿಚಕ್ರ ವಾಹನ ಸವಾರರು ಸರ್ಕಸ್ ಮಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸೆ.4ರಂದು ಆಲಂಕಾರಿನಿಂದ ಗೋಳಿತ್ತಡಿ ಕಡೆಗೆ ಹೋಗುತ್ತಿದ್ದ ಎಮ್ 80 ಸವಾರರೊಬ್ಬರು ಕುಂಡಾಜೆ ತಿರುವಿನಲ್ಲಿ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಎಮ್80 ಪಲ್ಟಿಯಾಗಿದೆ. ಘಟನೆಯಿಂದ ವಾಹನ ಜಖಂಗೊಂಡಿದೆ. ಈ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದೇ ಇದ್ದುದ್ದರಿಂದ ಸವಾರ ಅಪಾಯದಿಂದ ಪಾರಾಗಿದ್ದಾರೆ. ಇಲ್ಲಿ ಇನ್ನಷ್ಟು ವಾಹನಗಳಿಗೆ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಿ ರಾಜ್ಯ ಹೆದ್ದಾರಿಯಲ್ಲಿರುವ ಗುಂಡಿ ಮುಚ್ಚುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.













