ಪ್ರೌಢಶಾಲಾ ಹ್ಯಾಂಡ್‌ಬಾಲ್ ಪಂದ್ಯಾಟ-ಕಾಂಚನ ಪ್ರೌಢಶಾಲಾ ಬಾಲಕ/ಬಾಲಕಿಯರ ತಂಡ ಪ್ರಥಮ-ಜಿಲ್ಲಾಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಯ 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.



ಕಾಂಚನ ಪ್ರಾಥಮಿಕ ಶಾಲೆಯ 14ರ ವಯೋಮಾನದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡದ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಎಸ್.ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಲಕ್ಷ÷್ಮಣ ಗೌಡ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸುಭಾಶ್ಚಂದ್ರ ಕೆ. ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here