ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ, ಶಿಕ್ಷಕರ ದಿನಾಚರಣೆ

0

ಕಾಣಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು ಇದರ ವತಿಯಿಂದ “ಸಂಸ್ಕೃತಿ ಸಂಭ್ರಮ–2026” ಶೀರ್ಷಿಕೆಯಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆಯನ್ನು ಸೆ 4ರಂದು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ವೇಣುಗೋಪಾಲ್ ಕಳುವಾಜೆ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಎಂ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಓಣಂ ಹಬ್ಬದ ಸಾಂಸ್ಕೃತಿಕ ಮಹತ್ವ ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಸ್ಮರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದ ಅಂಗವಾಗಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳು ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

ಸಾಂಸ್ಕೃತಿಕ ವೈವಿಧ್ಯತೆ, ಶಿಕ್ಷಕರಿಗೆ ಗೌರವ ಹಾಗೂ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ “ಸಂಸ್ಕೃತಿ ಸಂಭ್ರಮ–2026” ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮವು ಸೌಹಾರ್ದತೆ, ಸಂತೋಷ ಮತ್ತು ಒಗ್ಗಟ್ಟಿನ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here