






ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಮಹಾಸಭೆಯು ಸೆ.6. ರಂದು ಸಂಪ್ಯ ಸಹಕಾರಿ ಸಂಘದ ಸಭಾಂಗಣದಲ್ಲಿ ಪೂರ್ವಾಹ್ನ ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿರವರ ಅಧ್ಯಕ್ಷತೆಯಲ್ಲಿ ಜರಗಲಿದೆ.


ಸನ್ಮಾನ ಕಾರ್ಯಕ್ರಮ:
ಈ ಸಂದರ್ಭದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಸನ್ಮಾನ ಹಾಗೂ ನಗದು ಬಹುಮಾನ, ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿರುವ ಆರ್ಯಾಪು, ಕುರಿಯ ಹಾಗೂ ಕೆಮ್ಮಿಂಜೆ ಗ್ರಾಮದ ಬಿ.ಎಲ್.ಒ ಹಾಗೂ ಸುಪರ್‌ವೈಸರ್‌ಗಳಿಗೆ ಸನ್ಮಾನ, ನೂತನವಾಗಿ ಜಾರಿಗೊಳಿಸಿರುವ ಸಹಕಾರಿ ಸಂಜೀವಿನಿ ವಿಮೆ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ನೆರವೇರಲಿದೆ. ಸಂಘದ ಸದಸ್ಯರು ಈ ವಾರ್ಷಿಕ ಮಹಾಸಭೆಯಲ್ಲಿ ಹಾಜರಾಗಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ರೈ ಎನ್.ಎಸ್.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













