






ಕಾವು :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ, ಮುದ್ದು ರಾಧೆ -ಕೃಷ್ಣ ವೇಷ ಸ್ಪರ್ಧೆ ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಸೆ 4 ರಂದು ನಡೆಯಿತು.
ಕ್ರೀಡಾಕೂಟ ಉದ್ಘಾಟನೆ :
ಕ್ರೀಡಾಕೂಟವನ್ನು ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ, ಸಲಹಾ ಸಮಿತಿ ಸದಸ್ಯರಾದ ಲೋಕೇಶ್ ಚಾಕೋಟೆ, ಹಿರಿಯರಾದ ರಾಮಚಂದ್ರ ಭಟ್ ಮಳಿ,ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಉಪಸ್ಥಿತರಿದ್ದರು. ಉದ್ಘಾಟನೆ ಬಳಿಕ ಅಂಗನವಾಡಿ ಮಕ್ಕಳಿಗೆ, ಮಕ್ಕಳಿಗೆ, ಮಹಿಳೆಯರಿಗೆ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.


ಮುದ್ದು ರಾಧೆ -ಮುದ್ದು ಕೃಷ್ಣ ವೇಷ ಸ್ಪರ್ಧೆ
ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ 11.30 ಕ್ಕೆ ಮುದ್ದು ಕೃಷ್ಣ -ಮುದ್ದು ರಾಧೆ ವೇಷ ಸ್ಪರ್ಧೆ ನಡೆಯಿತು.ಗೆಳೆಯರ ಬಳಗದ ನಾರಾಯಣ ಆಚಾರ್ಯ ಮಳಿ ಕಾರ್ಯಕ್ರಮ ನಿರ್ವಹಿಸಿದರು.




ಬಹುಮಾನ ವಿತರಣೆ
ಕ್ರೀಡಾಕೂಟದ ಬಳಿಕ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ, ಸಲಹಾ ಸಮಿತಿ ಸದಸ್ಯರಾದ ಲೋಕೇಶ್ ಚಾಕೋಟೆ,ಹಿರಿಯರಾದ ಹೊನ್ನಪ್ಪ ಪೂಜಾರಿ ಪಿಲಿಪಂಜರ, ಸಮಿತಿ ಸದಸ್ಯರಾದ ನಾರಾಯಣ ಆಚಾರ್ಯ ಮಳಿ ಬಹುಮಾನ ವಿತರಿಸಿದರು,ಸಮಿತಿ ಸದಸ್ಯರಾದ ಯೋಗೀಶ್ ಹೊಸಮನೆ,ದಿವ್ಯಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.










