ರಾಮಕುಂಜ ಆ.ಮಾ.ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಮತ್ತು ನೇತ್ರಾವತಿ ತುಳುಕೂಟ ರಾಮಕುಂಜ ಇವರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ (ಅಟ್ಟೆಮಿ ಪರ್ಬ)ಯನ್ನು ಸೆ.4ರಂದು ಆಚರಿಸಲಾಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಮಾತನಾಡಿ, ನಾವೆಲ್ಲರು ಕೃಷ್ಣನ ಜೀವನಾದರ್ಶಗಳನ್ನು ತಿಳಿದುಕೊಂಡು ತಮ್ಮ ಜೀವನ ಶೈಲಿಯನ್ನು ಬದಲಾಯಿಸಬೇಕೆನ್ನುವ ಸಂದೇಶವನ್ನು ಪಾಲಿಸಬೇಕೆಂದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ಎ.ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ, ಕೃಷ್ಣನ ಕುರಿತಾದ ಭಕ್ತಿಗೀತೆ ಸ್ಪರ್ಧೆ, ಕೃಷ್ಣವೇಷ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಮಧ್ಯಾಹ್ನ ಅಷ್ಟಮಿಯ ವಿಶೇಷ ತಿಂಡಿಯಾದ ಕೊಟ್ಟಿಗೆ, ಮೊಳಕೆ ಬರಿಸಿದ ಹೆಸರುಕಾಳು ಸಾರು ಮತ್ತು ಪಾಯಸವನ್ನು ಉಣಬಡಿಸಲಾಯಿತು. ಸಹಶಿಕ್ಷಕಿ ಶಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ನಯನ ಬಹುಮಾನಗಳ ಪಟ್ಟಿ ವಾಚಿಸಿದರು. ಸರಿತಾ ಜನಾರ್ದನ್ ಕಾರ್ಯಕ್ರಮ ಸಂಯೋಜಿಸಿದರು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದ, ನಿಲಯಪಾಲಕರು, ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here