







ಬುರೂಜ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ರಝಾ ನಗರ, ಕಲಾಬಾಗಿಲು ಇಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ಸೆ.5 ರಂದು ಕಾರ್ಯಕ್ರಮ ನಡೆಯಿತು.


9ನೇ ತರಗತಿ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜಿಸಿದ್ದರು.ಸಂಸ್ಥೆಯ ಆಡಳಿತ ಸಮಿತಿ ಮೇಲ್ವಿಚಾರಣೆಯಲ್ಲಿ ಶೇಖ್ ಸಾದಿ ಅವರು ಶಿಕ್ಷಕರಿಗೆ ಶಾಲು ಹೊದಿಸಿ, ಹೂ ನೀಡಿ ಗೌರವಿಸಿದರು. ಮುಖ್ಯ ಶಿಕ್ಷಕಿ ಜಯಶ್ರೀ ಸಾಲ್ಯಾನ್, ಶೇಖ್ ಜಲಾಲುದ್ದೀನ್ ಮತ್ತು ಅನ್ನಪೂರ್ಣೇಶ್ವರಿ ಅವರು ಶಿಕ್ಷಕರ ದಿನದ ಮಹತ್ವದ ಬಗ್ಗೆ ಮಾತನಾಡಿದರು.ವಿದ್ಯಾರ್ಥಿಗಳು ಶಿಕ್ಷಕರಿಗೆ ಕಿರು ಕಾಣಿಕೆ ನೀಡಿ ಕೃತಜ್ಞತೆ ಸಲ್ಲಿಸಿದರು. ಶಿಕ್ಷಕರಿಗಾಗಿ ಒಳಾಂಗಣ ಆಟಗಳನ್ನು ಆಯೋಜಿಸಲಾಗಿತ್ತು.













