ಪುದು ಮೌಲಾನಾ ಆಝಾದ್ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆ

0

ಪುತ್ತೂರು: ಕರ್ನಾಟಕ ಮೌಲಾನಾ ಆಝಾದ್ ಪಬ್ಲಿಕ್ ಸ್ಕೂಲ್ ಪುದು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಸೆ. 5ರ ಶನಿವಾರ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ಕಾರ್ಯಕ್ರಮ ನಡೆಯಿತು. ಪಿಯುಸಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜಿಸಿದ್ದರು.

ಪ್ರಾಂಶುಪಾಲೆ ಶೋಭಾ ಡಿ. ಬೋಳಾರ್ ಮಾತನಾಡಿ ಶಿಕ್ಷಕರ ದಿನದ ಮಹತ್ವ ಮತ್ತು ಶಿಕ್ಷಕರ ಪಾತ್ರದ ಕುರಿತು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಹೂ ನೀಡಿ ಗೌರವಿಸಿದರು ಮತ್ತು ಕಿರು ಕಾಣಿಕೆ ನೀಡಿ ಕೃತಜ್ಞತೆ ಸಲ್ಲಿಸಿದರು.

ಎಲ್‌ಕೆಜಿ, ಯುಕೆಜಿ ಹಾಗೂ 6ನೇ ತರಗತಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ನಂತರ ಶಿಕ್ಷಕರಿಗಾಗಿ ಒಳಾಂಗಣ ಆಟಗಳನ್ನು ಆಯೋಜಿಸಲಾಗಿತ್ತು. ಕೊನೆಯಲ್ಲಿ ಸಿಹಿ ಹಂಚಲಾಯಿತು.

LEAVE A REPLY

Please enter your comment!
Please enter your name here