ರಾಮಕುಂಜ: ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧಿ ಯೋಜನೆ ಕಡಬ ತಾಲೂಕು ಗೋಳಿತ್ತೊಟ್ಟು ವಲಯದ ರಾಮಕುಂಜ ಕಾರ್ಯಕ್ಷೇತ್ರದ ಶಾರದಾನಗರದಲ್ಲಿ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಶೀಲಾವತಿ ವಹಿಸಿದ್ದರು. ಶ್ರೀ ರಾಮಕುಂಜೇಶ್ವರ ಸಂಸ್ಕೃತ ಶಾಲೆಯ ನಿವೃತ್ತ ಶಿಕ್ಷಕಿ ಸಂಧ್ಯಾ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್‌ಕುಮಾರ್ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ರಾಮಕುಂಜ ಗ್ರಾ.ಪಂ.ಮಾಜಿ ಅಧ್ಯಕ್ಷೆ ಸುಚೇತಾ, ಶ್ರೀ ಶಾರದಾಂಬ ಭಜನಾ ಮಂಡಳಿ ಸಮಿತಿ ಸದಸ್ಯರಾದ ರಾಮಚಂದ್ರ ದೇವಾಡಿಗ, ಸದಾನಂದ ಆಚಾರ್ಯ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನಾ, ತರಬೇತಿ ಶಿಕ್ಷಕಿ ಪುಷ್ಪಾವತಿ ಉಪಸ್ಥಿತರಿದ್ದರು. ರಾಮಕುಂಜ ಸೇವಾ ಪ್ರತಿನಿಧಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು. ಸಬಳೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಪ್ರೇಮಾವತಿ ಸ್ವಾಗತಿಸಿದರು. ಸುಮಲತಾ ವಂದಿಸಿದರು.

LEAVE A REPLY

Please enter your comment!
Please enter your name here