







ಪುತ್ತೂರು: ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ.


ಕರ್ನಾಟಕ ಪೊಲೀಸ್ ಕಾಯ್ದೆ 55(ಎ), 55(ಬಿ)ರಡಿ ಗಡೀಪಾರು ಮಾಡುವಂತೆ ವಿಟ್ಲ ಪೊಲೀಸ್ ನಿರೀಕ್ಷಕರು ಸಲ್ಲಿಸಿದ್ದ ವರದಿಗೆ ಸಂಬಂಧಿಸಿದಂತೆ, ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 104096/2026ರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದ.ಕ. ಎಸ್ಪಿ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸೆ.5ರಂದು ಹೊರಡಿಸಿದ ಜ್ಞಾಪನದಲ್ಲಿ ತಿಳಿಸಿದ್ದಾರೆ.













