







ಪುತ್ತೂರು: ಕೂಲಿ ಕಾರ್ಮಿಕರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ಪೈಂತಿಮುಗೇರು ಎಂಬಲ್ಲಿ ಪತ್ತೆಯಾಗಿದೆ.


ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಎಂದು ಗುರುತಿಸಲಾಗಿದೆ.ಕಳೆದ ಕೆಲ ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಸೆ.8ರಂದು ಅವರ ಮನೆ ಸಮೀಪದ ತೋಡಿನಲ್ಲಿ ಕೊಳೆತ ವಾಸನೆ ಬರುತ್ತಿದ್ದು, ಪರಿಶೀಲಿಸಿದಾಗ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.













