ಹಳೆಪೇಟೆ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ರೇಷ್ಮಾ ನಿವೃತ್ತಿ

0

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೆಪೇಟೆ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ರೇಷ್ಮಾ ಅವರು ಆ.31ರಂದು ನಿವೃತಿ ಹೊಂದಿದರು.


ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಗ್ರಾಮದ ಬೇರಿಕೆ ಮನೆಯ ಜೋನ್ ವೇಗಸ್ ಹಾಗೂ ಎವಿನ್ ಡಿಸೋಜಾ ದಂಪತಿಯ ಪುತ್ರಿಯಾಗಿರುವ ರೇಷ್ಮಾ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆಕ್ಕಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ಉಪ್ಪಿನಂಗಡಿ ಸಂತ ಫಿಲೋಮಿನಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಉಪ್ಪಿನಂಗಡಿ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಮುಗಿಸಿದ ನಂತರ ಮಂಗಳೂರಿನ ಕಪಿತಾನಿಯೋ ಶಿಕ್ಷಕ ತರಬೇತಿ ಕೇಂದ್ರದಲ್ಲಿ ಟಿ.ಸಿ.ಹೆಚ್ ತರಬೇತಿ ಪೂರ್ಣಗೊಳಿಸಿದ್ದಾರೆ.


1996ರಿಂದ 1998ರವರೆಗೆ ಕಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಂತರ 2014ರವರೆಗೆ ಸುಮಾರು 16 ವರ್ಷಗಳ ಕಾಲ ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ, ನಂತರ 2026ರವರೆಗೆ ಸುಮಾರು 12 ವರ್ಷಗಳಿಂದ ಉಜಿರೆಯ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಆ.31ರಂದು ನಿವೃತ್ತಿ ಹೊಂದಿದ್ದಾರೆ.


ಇವರ ಪತಿ ನಿವೃತ್ತ ಸೈನಿಕ ಲಕ್ಷ್ಮಣ್ ಜಿ.ಡಿ ಅವರು 21 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಉಜಿರೆಯ ಶ್ರೀ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ 17 ವರ್ಷಗಳ ಸೇವೆ ಸಲ್ಲಿಸಿ ಜೂ.30ರಂದು ನಿವೃತ್ತಿ ಹೊಂದಿದ್ದಾರೆ. ಮಗಳು ದೀಕ್ಷಾ ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಅಳಿಯ ದರ್ಶನ್ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಉದ್ಯೋಗದಲ್ಲಿದ್ದಾರೆ. ರೇಷ್ಮಾ ಅವರು ಪ್ರಸ್ತುತ ಎರ್ನೋಡಿಯಲ್ಲಿ ನೆಲೆಸಿದ್ದಾರೆ.

LEAVE A REPLY

Please enter your comment!
Please enter your name here