






ಕಡಬ: ಉಪ್ಪಿನಂಗಡಿಯಲ್ಲಿ ಸೆ.6ರಂದು ನಡೆದ ಯುನೈಟೆಡ್ ಕರಾಟೆ ಬುಡೂಕಾನ್ ಇಂಟರ್ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ 2026 ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.


ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಕೆ.ಎಚ್ ವಿಖ್ಯಾತ್ ಕುಮಾರ್ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿ ಪವನ್ ಅವರು ತಲಾ ಕುಮಿಟೆ ಮತ್ತು ಕಟ ವಿಭಾಗಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕರಾದ ಯಾದವ ಬೀರಂತಡ್ಕ ಅವರು ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು.













