ವಿಶ್ವವಿದ್ಯಾಲಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ನಿಶ್ವಿತಾಗೆ ಬೆಳ್ಳಿ

0

ಪುತ್ತೂರು: ಉಡುಪಿಯ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಒಳಾಂಗಣ ಕ್ರೀಡಾಂಗಣದಲ್ಲಿ ಸೆ.5ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಚಾಂಪಿಯನ್‌ಶಿಪ್ 2026-27ರಲ್ಲಿ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತಂಡದ ನಿಶ್ವಿತಾ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ತಂಡದಲ್ಲಿ ಒಬ್ಬ ಪುರುಷ ಹಾಗೂ ಮೂವರು ಮಹಿಳಾ ವಿದ್ಯಾರ್ಥಿಗಳು ಇದ್ದು, ಕಾಲೇಜಿನ ಪ್ರಥಮ ವರ್ಷದ ಬಿ.ಎಸ್ಸಿ. ವಿದ್ಯಾರ್ಥಿನಿ ನಿಶ್ವಿತಾ ಅವರು ಮಹಿಳೆಯರ -68 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.

LEAVE A REPLY

Please enter your comment!
Please enter your name here