ವಿದ್ಯಾಮಾತಾ ಅಕಾಡೆಮಿಯಲ್ಲಿ ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

0

ಪುತ್ತೂರು:ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರವು ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಿರುವ PSTR/GPSTR/HSTR ನೇಮಕಾತಿಗೆ ಪೂರಕವಾಗಿ ಈಗಾಗಲೇ ತರಬೇತಿಯನ್ನು ಪ್ರಾರಂಭಿಸಿದ್ದು ಇದೀಗ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್ ಮೂಲಕ ವಿದ್ಯಾಮಾತಾ ಅಕಾಡೆಮಿ ನೀಡಲಿದ್ದು, ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಈ ತರಗತಿಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು.

800ಕ್ಕೂ ಅಧಿಕ ಅಭ್ಯರ್ಥಿಗಳನ್ನು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸಿದ ಹೆಗ್ಗಳಿಕೆಯೊಂದಿಗೆ ತರಬೇತಿ ಆಯೋಜಿಸಿರುವ ವಿದ್ಯಾಮಾತಾದಲ್ಲಿ ಕಳೆದ ಸಾಲಿನ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ತರಬೇತಿ ಪಡೆದ 5 ವಿದ್ಯಾರ್ಥಿಗಳು GPSTR ನೇಮಕಾತಿಯಲ್ಲಿ ಉತ್ತೀರ್ಣರಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
PSTR/GPSTR/HSTR ನೇಮಕಾತಿಗೆ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ 25.09.2025ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ಸರಕಾರಿ ಶಿಕ್ಷಕರಾಗುವ ಕನಸನ್ನು ನನಸು ಮಾಡಿಕೊಳ್ಳಲು ಸೂಕ್ತ ಅವಕಾಶವಾಗಿದೆ.


ವಿದ್ಯಾಮಾತಾ ಅಕಾಡೆಮಿ ಆಯೋಜಿಸಿರುವ ಈ ಕ್ರ್ಯಾಶ್ ಕೋರ್ಸ್ ಆನ್ಲೈನ್ ಲೈವ್ ರಾತ್ರಿ ಸಮಯ 7 ರಿಂದ 10 ರವರೆಗೆ, ನಡೆಯಲಿದೆ, ಅಲ್ಲದೇ ಪ್ರತೀ ಆದಿತ್ಯವಾರ ವಿಶೇಷ ನೇರ ತರಗತಿಯನ್ನು ಸಹ ಆಯೋಜಿಸಿದ್ದು ಈ ತರಗತಿಗಳು ಬೆಳಿಗ್ಗೆ 10 ರಿಂದ ಸಂಜೆ 4 ರ ವರೆಗೆ ನಡೆಯುತ್ತದೆ ಆಸಕ್ತ ಅಭ್ಯರ್ಥಿಗಳು ಕೂಡಲೇಪುತ್ತೂರಿನ ಎಪಿಯಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಸಂಖ್ಯೆ 9945182516/ 9620468869 ನ್ನು ಸಂಪರ್ಕಿಸಿ ದಾಖಲಾತಿ ಪಡೆದುಕೊಳ್ಳಬಹುದು.

LEAVE A REPLY

Please enter your comment!
Please enter your name here