ಕೊಣಾಲು ಶಾಲೆಯಲ್ಲಿ ವ್ಯಸನ ಮುಕ್ತ ಭಾರತ, ವಿದ್ಯಾರ್ಥಿಗಳೊಂದಿಗೆ ಸಂವಾದ

0

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಇದರ ವತಿಯಿಂದ ಕೊಣಾಲು ಸರ್ಕಾರಿ ಪ್ರೌಢಶಾಲೆಯಲ್ಲಿ ‘ವ್ಯಸನ ಮುಕ್ತ ಭಾರತ ‘ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.


ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಅವರು, ವ್ಯಸನದ ದುಷ್ಪರಿಣಾಮಗಳು ಹಾಗೂ ಅದರಿಂದ ದೂರವಿರುವ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯಶಿಕ್ಷಕ ಶಶಿಧರ ಶೆಟ್ಟಿ, ನೆಲ್ಯಾಡಿ ಜೆಸಿಐ ಜೊತೆ ಕಾರ್ಯದರ್ಶಿ ಸುಪ್ರೀತಾ ರವಿಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೆಸಿಐ ಸದಸ್ಯ ಪ್ರಶಾಂತ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ರೇಷ್ಮಾ ಅವರು ಜೆಸಿ ವಾಣಿ ವಾಚಿಸಿದರು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here