






ಬೆಟ್ಟಂಪಾಡಿ: ಇಲ್ಲಿನ ಮಿತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಕೇಸರಿ ಮಿತ್ರವೃಂದ ಕೇಸರಿನಗರ ಮಿತ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ವಿವಿಧ ಕ್ರೀಡಾಕೂಟ, ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮ ಸೆ.4ರಂದು ಜರಗಿತು.



ಬೆಳಿಗ್ಗೆ ಹಿರಿಯರಾದ ನೀಲಮ್ಮ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ಈ ವೇಳೆ ಬೆಟ್ಟಂಪಾಡಿ ಕ್ಲಸ್ಟರ್ ಸಿಆರ್ಪಿ ನಾರಾಯಣ ಡಿ. ಪುಣಚ ಉಪಸ್ಥಿತರಿದ್ದು ಶುಭ ಹಾರೈಸಿದರು. ಎಸ್ಡಿಎಂಸಿ ಅಧ್ಯಕ್ಷೆ ಸವಿತಾ ಯತೀಶ್ ಉಪಸ್ಥಿತರಿದ್ದರು. ನಂತರ ವಿವಿಧ ಊರವರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟಗಳು ನಡೆದವು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರಂದರ ಗೌಡ ನಾಯರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂಬ್ರ ಕೆಪಿಎಸ್ನ ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಮಿತ್ತಡ್ಕ, ಮಿತ್ತಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಕ್ಷ್ಮೀ ಸಿ.ಎಚ್., ಗೋಕುಲ್ ಕನ್ಸ್ಟ್ರಕ್ಷನ್ನ ಮ್ಹಾಲಕ ನವೀನ್ ಮಣಿಯಾಣಿ ತಲೆಪ್ಪಾಡಿ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಜಯ್ ಕುಲಾಲ್ ಮಿತ್ತಡ್ಕ, ಕೋಶಾಧಿಕಾರಿ ರಕ್ಷಣ್ ಬೇಂಗತ್ತಡ್ಕ, ಕೇಸರಿ ಮಿತ್ರವೃಂದ ಕೇಸರಿನಗರದ ಅಧ್ಯಕ್ಷ ರಾಧಾಕೃಷ್ಣ ಗೌಡ ಮಿತ್ತಡ್ಕ, ಕಾರ್ಯದರ್ಶಿ ಪ್ರಶಾಂತ್ ಮಿತ್ತಡ್ಕ, ಕೋಶಾಧಿಕಾರಿ ನಿಖಿಲ್ ಕುಮಾರ್ ಮಡ್ಯಂಪಾಡಿ, ಸದಸ್ಯರು ಉಪಸ್ಥಿತರಿದ್ದರು.




ಕ್ರೀಡಾ ಪ್ರತಿಭೆಗೆ ಸನ್ಮಾನ
ಇದೇ ವೇಳೆ ಊರಿನ ಕ್ರೀಡಾ ಪ್ರತಿಭೆ, ರಾಷ್ಟ್ರೀಯ ಮಟ್ಟದ ಖೋಖೋ ಕ್ರೀಡೆಯಲ್ಲಿ ಭಾಗವಹಿಸಿರುವ ಸಿಂಚನಾ ಎಸ್.ಎಂ. ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ
ಮಿತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕಾರ್ಯಕ್ರಮದ ಅಂಗವಾಗಿ ಉಚಿತವಾಗಿ ಬ್ಯಾಗ್ ವಿತರಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕೋಶಾಧಿಕಾರಿ ಶಿವಪ್ರಸಾದ್ ತಲೆಪ್ಪಾಡಿ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿನಿ ವರ್ಷಿಣಿ ವಂದಿಸಿದರು. ಯತೀಶ್ ಕುಲಾಲ್ ಕೋರ್ಮಂಡ ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನ ಸಹಭೋಜನ ನಡೆಯಿತು. ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಮಾರು 25ಕ್ಕೂ ಮಿಕ್ಕಿ ಪುಟಾಣಿಗಳು ಶ್ರೀಕೃಷ್ಣ ವೇಷಧಾರಿಗಳಾಗಿ ಸಂಭ್ರಮಿಸಿದರು.











