ನಾಳೆ(ಸೆ.10) : ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಮತ್ತು ವಾಟರ್ ಸಪ್ಲೈ ಫೀಡರ್‌ನಲ್ಲಿ ಸೆ.10 ರಂದು ಪೂರ್ವಾಹ್ನ ಗಂಟೆ 10:೦೦ ರಿಂದ ಅಪರಾಹ್ನ 5:೦೦ ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ವಾಟರ್ ಸಪ್ಲೈ, ದರ್ಬೆ, ಕೆಎಸ್‌ಆರ್‌ಟಿಸಿ, ನೆಲ್ಲಿಕಟ್ಟೆ, ಕಲ್ಲಾರೆ, ಸಾಮೆತ್ತಡ್ಕ, ಹನುಮಾನ್ ಮಿಲ್, ಅಶ್ವಿನಿ ಸರ್ಕಲ್, ಐಬಿ, ಎಂ.ಟಿ. ರೋಡ್ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here