







ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ ಉಪ ವಲಯಾರಣ್ಯಾಧಿಕಾರಿಗಳ ಸಂಘ, ಮತ್ತು ದ.ಕ. ಜಿಲ್ಲಾ ಅರಣ್ಯ ವೀಕ್ಷಕ ಹಾಗೂ ಗಸ್ತು ಅರಣ್ಯಪಾಲಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸೆ.11ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಕಾರ್ಯಕ್ರಮಗಳು ಸರಕಾರಿ ನೌಕರರ ಸಂಘದ ಕಟ್ಟಡದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಉದ್ಘಾಟಿಸಲಿದ್ದಾರೆ. ಹಲವು ಮಂದಿ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಹಾಗೂ ಪುತ್ತೂರು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕರಿಸಲಿದ್ದಾರೆ. ಬೆಳಿಗ್ಗೆ 9.00ಗಂಟೆಯಿಂದ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.












