






ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೆ.8ರಂದು ವಿಟ್ಲದ ಪಿಎಂಶ್ರೀ ಕೆ.ಪಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ದರ್ಬೆ ಪಾಂಗಾಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ರಿಯೊನ್ ಲಸ್ರಾದೊ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಯಾದಗಿರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಇವರು ಇಡ್ಕಿದು ಗ್ರಾಮದ ಮಿತ್ತೂರು ನಿವಾಸಿ ರೋಷನ್ ಲಸ್ರಾದೋ ಹಾಗು ಶುಶಾಂತಿ ಲಸ್ರಾದೋ ದಂಪತಿ ಪುತ್ರ.













