ಈಶ್ವರಮಂಗಲ ಗಜಾನನ ಆ.ಮಾ ಶಾಲೆಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

0

ಪುತ್ತೂರು:ಪುತ್ತೂರು ಗ್ರಾಮಾಂತರ ವಲಯ ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ಶಾಲಾ ಶಿಕ್ಷಣ ಇಲಾಖೆ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಯೋಗದೊಂದಿಗೆ ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲದಲ್ಲಿ ನಡೆಯಿತು.


ಈ ಕಾರ್ಯಕ್ರಮವನ್ನು ಶಾಲಾಡಳಿತ ಮಂಡಳಿಯ ಸದಸ್ಯರು ಹಾಗೂ ನಿವೃತ್ತ ಶಿಕ್ಷಕ ಶಿವರಾಮ ಶರ್ಮ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಕ್ರೀಡೆಯಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ,ಕ್ರೀಡಾಳುಗಳಲ್ಲಿ ಕ್ರೀಡಾ ಸ್ಪೂರ್ತಿ ಮುಖ್ಯ, ನಮ್ಮ ಕ್ರೀಡಾಂಗಣದಲ್ಲಿ ಆಡಿದ ಮಕ್ಕಳು ಇಂದು ರಾಷ್ಟ್ರ ಮಟ್ಟದ ಕ್ರೀಡಾಪಟುಗಳಾಗಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದರು.


ಮುಖ್ಯ ಅತಿಥಿ, ಶಾಲಾಡಳಿತ ಮಂಡಳಿಯ ಸದಸ್ಯ ಜೈರಾಜ್ ರೈರವರು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಡಳಿತ ಮಂಡಳಿಯ ಸಂಚಾಲಕ ಶಿವರಾಮ್ ಪಿ ರವರು ಮಾತನಾಡಿ ಕ್ರೀಡೆಯಲ್ಲಿ ಸೋತಾಗ ಕುಗ್ಗದೆ ಅವಿರತ ಪರಿಶ್ರಮದಿಂದ ಗೆಲುವನ್ನು ನಮ್ಮದಾಗಿಸಬೇಕೆಂದರು.


ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ನೋಡೆಲ್ ಅಧಿಕಾರಿಯಾದ ಚಂದ್ರಕಲಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಪ್ರವೀಣ,ಮಾಜಿ ಅಧ್ಯಕ್ಷ ಸೀತಾರಾಮ ಗೌಡ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಚಿನ್ಮಯ ಪನೆಯಾಲ ಇವರು ಉಪಸ್ಥಿತರಿದ್ದರು.

ಕ್ರೀಡಾಕೂಟದ ಮುಕ್ತಾಯದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲ ಹಾಗೂ ದ್ವಿತೀಯ ಸ್ಥಾನವನ್ನು ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲ ಪಡೆದುಕೊಂಡಿತು.ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲ ಹಾಗೂ ದ್ವಿತೀಯ ಸ್ಥಾನವನ್ನು ಸರ್ವೋದಯ ಪ್ರೌಢ ಶಾಲೆ ಸುಳ್ಯಪದವು ಪಡೆದುಕೊಂಡಿತು.


ಕಬಡ್ಡಿ ಪಂದ್ಯಾಟದಲ್ಲಿ ವಿವಿಧ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು, ಶಾಲಾಡಳಿತ ಮಂಡಳಿಯ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಶಿಕ್ಷಕಿಯರಾದ ಪ್ರಮೀಳಾ ಸ್ವಾಗತಿಸಿ, ಸಂಧ್ಯಾ ವಂದಿಸಿದರು. ಕಾರ್ಯಕ್ರಮವನ್ನು ಪ್ರಸೀದಾ, ಸೌಮ್ಯ ಕೆ ಹೆಚ್ ಹಾಗೂ ಧನಲಕ್ಷ್ಮಿ ನಿರೂಪಿಸಿದರು.

LEAVE A REPLY

Please enter your comment!
Please enter your name here