ಖೋ ಖೋ : ರಾಮಕುಂಜ ಆ.ಮಾ.ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ 14 ಮತ್ತು 17ರ ವಯೋಮಾನದ ಬಾಲಕ /ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ, 17ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ., ದಿವ್ಯಾ ಪಿ.ಎನ್., ಕಿಶನ್ ರಾಜ್ ಹಾಗೂ ರಾಘವ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here