ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ

0

ಪುತ್ತೂರು:ಪಂಜಾಬ್ ನ ಲೂಧಿಯಾನದ ಗುರುನಾನಕ್ ಕ್ರೀಡಾಂಗಣದಲ್ಲಿ ಸೆ.1ರಿಂದ 3ರವರೆಗೆ ನಡೆದ 21 ನೇ ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 18ರ ವಯೋಮಾನದವರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ ಅವರು 1.68 ಮೀಟರ್ ಜಿಗಿದು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ.

ಇವರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ನಿವಾಸಿ ಮೋನಪ್ಪ ಮತ್ತು ಲಲಿತಾ ಅವರ ಪುತ್ರಿಯಾಗಿರುತ್ತಾರೆ. ದೈಹಿಕಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ ಬಾರ್ತಿಕುಮೇರು, ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here