







ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರು ( ಆಡಳಿತ), ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಹಾಗೂ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ, ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿನಿ ಕ್ಲಿಯಾ ರಿನೇಲಾ ಪಿಂಟೋ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಫಿಲೋಮಿನಾ ಅನುದಾನಿತ ಪ್ರೌಢಶಾಲಾ ಅಧ್ಯಾಪಕರಾದ ಕ್ಲೆಮೆಂಟ್ ಪಿಂಟೋ ಹಾಗೂ ರೇಷ್ಮಾ ರೆಬೆಲ್ಲೋ ಇವರ ಸುಪುತ್ರಿ. ರಾಜ್ಯಮಟ್ಟದ ಕ್ರೀಡಾಕೂಟವು ಬೆಂಗಳೂರಿನ ರಾಮನಗರದಲ್ಲಿ ಅಕ್ಟೋಬರ್ ತಿಂಗಳಂದು ನಡೆಯಲಿರುವುದು.


ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಮುಖ್ಯ ಗುರುಗಳು, ಶಿಕ್ಷಕರು ಮತ್ತು ಪೋಷಕರು ಹಾಗೂ ಹಿತೈಷಿಗಳು ಅಭಿನಂದನೆಯನ್ನು ಸಲ್ಲಿಸಿದ್ದು ರಾಜ್ಯಮಟ್ಟದ ಸ್ಪರ್ಧೆಗೆ ಶುಭ ಹಾರೈಸಿರುತ್ತಾರೆ.













