







ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ದೈಹಿಕ ಶಿಕ್ಷಣ ವಿಭಾಗ ಪುತ್ತೂರು, ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಂತೂರು ಇವುಗಳ ಆಶ್ರಯದಲ್ಲಿ ಕುಂತೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ 14ರ ವಯೋಮಾನದ ಬಾಲಕ ಹಾಗೂ ಬಾಲಕಿಯರ ಖೋ ಖೋ ಪಂದ್ಯಾಟ ನಡೆಯಿತು.


ಈ ಪಂದ್ಯಾಟದಲ್ಲಿ ಭಾಗವಹಿಸಿದ್ದ ಹಳೆನೇರೆಂಕಿ ಸರಕಾರಿ ಉನ್ನತ ಹಿ.ಪ್ರಾ.ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಬಿ., ಮಾಧವ ಬಿ.ಎಂ., ಹಾಗೂ ಭರತ್ ಅವರು ತರಬೇತಿ ನೀಡಿದ್ದಾರೆ.













