








ಪುತ್ತೂರು: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಆಶ್ರಯದಲ್ಲಿ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ ಜನ್ಮ ದಿನಾಚರಣೆ ಅಂಗವಾಗಿ ರಬೀವುಲ್ ಅವ್ವಲ್ ಗ್ರ್ಯಾಂಡ್ ಮೌಲೀದ್ ಪಾರಾಯಣ ಮತ್ತು ಈ ವರ್ಷ ನಿಧನರಾದ ಸಂಸ್ಥೆಯ ಸದಸ್ಯರ ಮಗ್ಫಿರತ್‌ಗಾಗಿ ದುವಾ ಪ್ರಾರ್ಥನೆ ಅನ್ಸಾರ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಿತು.




ಗಾಂಧಿನಗರ ಜುಮ್ಮಾ ಮಸ್ಜಿದ್ ಖತೀಬ್ ಅಲ್-ಹಾಜ್ ಅಶ್ರಫ್ ಖಾಮಿಲ್ ಸಖಾಫಿ, ಮೊಗರ್ಪಣೆ ಜುಮ್ಮಾ ಮಸ್ಜಿದ್ ಮುದರ್ರಿಸ್ ಅಲ್-ಹಾಜ್ ಅಬ್ದುಲ್ ಖಾದರ್ ಮುಸ್ಲಿಯಾರ್ ಮುದುಗುಡ, ಗಾಂಧಿನಗರ ಮುದರ್ರಿಸ್ ಮುಬಶಿರ್ ಅಹ್ಸನಿ, ಸದರ್ ಉಸ್ತಾದ್ ಸಿರಾಜುದ್ದೀನ್ ಸಖಾಫಿ, ಅನ್ಸಾರ್ ಅಧ್ಯಕ್ಷ ಕೆ.ಬಿ. ಇಬ್ರಾಹಿಂ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ, ಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆ.ಎಂ.ಎಸ್ ಮಹಮ್ಮದ್ ಮೊದಲಾದವರು ಭಾಗವಹಿಸಿದ್ದರು.










