






ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳು ಹಾಗೂ ಸವಾಲುಗಳ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.



ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಪ್ರಸಿದ್ಧ ಮಕ್ಕಳ ತಜ್ಞರು ಮತ್ತು ಹದಿ ಹರೆಯದ ಮಕ್ಕಳ ಆರೋಗ್ಯ ಸಲಹೆಗಾರರಾದ ಡಾ. ಸುಲೇಖಾ ವರದರಾಜ್ ಮಾತನಾಡಿ, ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯದ ಮಾರ್ಗದರ್ಶನ ಹಾಗೆಯೇ ವ್ಯಾಯಾಮ ದ ಮಹತ್ವ ಮತ್ತು ಮಾದಕದ್ರವ್ಯದ ಜಾಲದ ಬಗ್ಗೆ ಎಚ್ಚರಿಕೆಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರಿಗೂ ಅವರ ಶೈಕ್ಷಣಿಕ ಜವಾಬ್ದಾರಿಗಳನ್ನು ಹಾಗೂ ಪೋಷಕತ್ವದ ಜವಾಬ್ದಾರಿಯನ್ನು ತಿಳಿಸಿದರು.



ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿಗಳಾದ ಕೃಷ್ಣ ಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಹರೀಶ ಪುತ್ತೂರಾಯ, ಮುಖ್ಯ ಶಿಕ್ಷಕರಾದ ಪ್ರಸನ್ನ ಕೆ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.










