






ಪುತ್ತೂರು:ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತಿದಾರರಾದ ಜೆಸಿ ಸುಹಾಸ್ ಮಾರಿಕೆ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ನಾಯಕತ್ವದ ಮಹತ್ವ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ವಿಧಾನಗಳು ಹಾಗೂ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಅಗತ್ಯವಿರುವ ಪ್ರಮುಖ ಕೌಶಲ್ಯಗಳ ಕುರಿತು ಪರಿಣಾಮಕಾರಿ ಹಾಗೂ ಅರ್ಥಪೂರ್ಣ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಫ್ಎಂ ಪ್ರವೀಣಿ ಶೆಟ್ಟಿ, ಅಧ್ಯಕ್ಷರು, ಜೆಸಿಐ ನೆಲ್ಯಾಡಿ ವಹಿಸಿದ್ದರು.ಜೆಸಿ ದೀಪಿಕಾ ಡಿಎಂ ಕಾರ್ಯಕ್ರಮವನ್ನು ನಿರೂಪಿಸಿದರು. ಜೆಸಿ ವಾಣಿ ಸುಪ್ರಿತಾ ರವಿಚಂದ್ರ ಅವರು ವಾಚನ ನೆರವೇರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಜೆಸಿ ಶ್ರೇಯಸ್ ಶೆಟ್ಟಿ ಅವರು ಧನ್ಯವಾದ ಸಮರ್ಪಿಸಿದರು. ಪೂರ್ವಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಮತ್ತು ಅಬ್ರಹಾಂ ವರ್ಗಿಸ್ ರವರವು ಉಪಸ್ಥಿತರಿದ್ದರು.










