







ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ಬಲ್ನಾಡು ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಕಬಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮ ಸೆ.11ರಂದು ನಡೆಯಿತು.



ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿ ವಿಟ್ಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ. ರಾಧಾಕೃಷ್ಣ ಭಟ್ ಕೊಡಿಪಾಡಿ ಮಾಹಿತಿ ನೀಡಿ ದುಶ್ಚಟ ಮುಕ್ತ ಸಮಾಜದ ಬಗ್ಗೆ ಮಾತನಾಡಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ, ಬಲ್ನಾಡು ವಲಯ ಮಾಜಿ ವಲಯಾಧ್ಯಕ್ಷ ಚಂದ್ರಶೇಖರ ಗೌಡ,ಶೌರ್ಯ ವಿಪತ್ತು ನಿರ್ವಹಣಾ ತಂಡದ ಪ್ರತಿನಿಧಿ ಜಗದೀಶ್ ಗೌಡ,ಕೊಡಿಪಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಹರಿಕೃಷ್ಣ ಗುತ್ತು,ಒಕ್ಕೂಟದ ಅಧ್ಯಕ್ಷರಾದ ಸೌಮ್ಯ,ಬಾನುಮತಿ, ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್,ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಆಶಾಲತಾ,ಸೇವಾಪ್ರತಿನಿಧಿ ಚಿತ್ರಾ, ನಳಿನಿ,ಸಹ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













