







ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, (ಆಡಳಿತ) ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಹಾಗೂ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ, ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶನೆಲ್ ಮರಿಯ ಲೋಬೊ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಪುತ್ತೂರು ನಗರ ವಲಯ ಹಾಗೂ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಫಿಲೋಮಿನಾ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ನರೇಶ್ ಲೋಬೊ ಹಾಗೂ ಸವಿತಾ ಮಸ್ಕೇರೆನ್ಹಸ್ ಇವರ ಪುತ್ರಿ. ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಬೆಂಗಳೂರಿನ ರಾಮನಗರದಲ್ಲಿ ನಡೆಯಲಿರುವುದು. ಇವರ ಸಾಧನೆಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಯಿನಿ, ರಕ್ಷಕ – ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದು ರಾಜ್ಯಮಟ್ಟದ ಸ್ಪರ್ಧೆಗೆ ಶುಭಹಾರೈಸಿರುತ್ತಾರೆ.













