ಜ್ಞಾನ ಚೈತನ್ಯ 2026 ಸ್ಪರ್ಧೆ :ಇಂಡಿಯನ್ ಸ್ಕೂಲ್ ಉಪ್ಪಿನಂಗಡಿಗೆ ಸಮಗ್ರ ಚಾಂಪಿಯನ್‌ಶಿಪ್

0

ಉಪ್ಪಿನಂಗಡಿ: ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜಿನಲ್ಲಿ ಸೆಪ್ಟೆಂಬರ್ 12ರಂದು ನಡೆದ ಜ್ಞಾನ ಚೈತನ್ಯ 2026 ಸ್ಪರ್ಧೆಯಲ್ಲಿ ಇಂಡಿಯನ್ ಸ್ಕೂಲ್ ಉಪ್ಪಿನಂಗಡಿ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಕ್ಕಿಂಗ್‌ ವಿತೌಟ್‌ ಫೈಯರ್ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಫಾತಿಮತುಲ್ ಅಬಿದಾ ಹಾಗೂ ಆಯಿಷಾ ಅಲ್ಫಾ ಪ್ರಥಮ ಸ್ಥಾನ ಪಡೆದಿದ್ದಾರೆ.

Wealth Out of Waste ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಫಾತಿಮತ್ ಸುಹಾ ಹಾಗೂ ಫಾತಿಮತ್ ನೌಶಿಯಾ ಪ್ರಥಮ ಸ್ಥಾನ ಗಳಿಸಿದ್ದಾರೆ.ರಸಪ್ರಶ್ನೆ (Quiz Competition) ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಫಾತಿಮತ್ ತನ್ವೀರಾ ಹಾಗೂ ಮೊಹಮ್ಮದ್ ಮುಸ್ತಫಾ ಎಂ. ಬಿ. ಪ್ರಥಮ ಸ್ಥಾನ ಪಡೆದಿದ್ದಾರೆ.

ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಅತ್ಯುತ್ತಮ ಸಾಧನೆಯ ಫಲವಾಗಿ ಇಂಡಿಯನ್ ಸ್ಕೂಲ್ ಉಪ್ಪಿನಂಗಡಿ ಸಮಗ್ರ ಚಾಂಪಿಯನ್‌ಶಿಪ್ ಜೊತೆಗೆ ಟ್ರೋಫಿ ಹಾಗೂ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕಿಯರಾದ ಭವ್ಯಶ್ರೀ ಮತ್ತು ಅನಿತಾ ರವರನ್ನು ಶಾಲೆಯ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here