ಮೂಡುಬೈಲ್: ಕಾರು-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಹಲವರಿಗೆ ಗಾಯ

0

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟಾಟಾ ಸಫಾರಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿ ಸೆ.೧೨ರಂದು ಮಧ್ಯಾಹ್ನ ನಡೆದಿದೆ.


ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿಗೆ ತಲುಪುತ್ತಿದ್ದಂತೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಟಾಟಾ ಸಫಾರಿ ಕಾರು ಚಾಲಕ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬಸ್ಸಿಗೆ ಡಿಕ್ಕಿಯಾಗಿರುವುದಾಗಿ ವರದಿಯಾಗಿದೆ. ಡಿಕ್ಕಿಯ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಗಾಯಗಳಾಗಿದ್ದು, ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿವೆ.

ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಸಫಾರಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ಗೌತಮ್ ಸಿಂಗ್ ಎಂಬವರ ವಿರುದ್ಧ ಬಸ್ ಚಾಲಕ ಯತೀಶ್ ಕೆ. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here